ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಚರಣ್ ರಾಜ್ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ಜೂನ್ 4 ರಂದು ಪುತ್ತೂರು ತಾಲೂಕಿನ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ಎಂಬಾತನ ಕೊಲೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೋಲೀಸ್ ವಶದಲ್ಲಿರುವ ಆರೋಪಿಗಳ ಸಂಖ್ಯೆ ಇದೀಗ ಆರಕ್ಕೆ ಏರಿದೆ. 2019ರಲ್ಲಿ ಪುತ್ತೂರಿನಲ್ಲಿ ನಡೆದ ಕಾರ್ತಿಕ್‌ ಮೇರ್ಲ್ ಎಂಬಾತನ ಕೊಲೆ ಆರೋಪಿಯಾಗಿದ್ದ ಚರಣ್ ರಾಜ್‌ನನ್ನು ಎರಡು ಬೈಕ್‌ಗಳಲ್ಲಿ ಬಂದ ಮೂವರು ಆರೋಪಿಗಳು ತಲವಾರು ಮತ್ತೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಬೆಳ್ಳಾರೆ ಪೋಲೀಸರು ಇದೀಗ ಒಟ್ಟು ಆರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಿಶೋರ್ ಪೂಜಾರಿ, ರೇವಂತ್, ರಾಕೇಶ್ ಪಂಚೋಡಿ, ನರ್ಮೇಶ್, ನಿತಿಲ್ ಶೆಟ್ಟಿ ಮತ್ತು ವಿಜೇಶ್ ಪೋಲೀಸ್ ವಶದಲ್ಲಿರುವ ಆರೋಪಿಗಳಾಗಿದ್ದಾರೆ‌. ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೊನಾವಣೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಎರಡು ತಂಡಗಳನ್ನು ರಚಿಸಿದ್ದು, ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸೈ ಉದಯರವಿ ಮತ್ತು ಬೆಳ್ಳಾರೆ ಠಾಣೆಯ ರುಕ್ಮಾ ನಾಯ್ಕ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

Edited By : Nagaraj Tulugeri
Kshetra Samachara

Kshetra Samachara

06/06/2022 05:21 pm

Cinque Terre

11.19 K

Cinque Terre

0

ಸಂಬಂಧಿತ ಸುದ್ದಿ