ಮಂಗಳೂರು: ಹಳೆಯ ವೈಷಮ್ಯದಿಂದ ಸ್ನೇಹಿತರೇ ರೌಡಿಶೀಟರ್‌ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ರಾಜಾ ಅಲಿಯಾಸ್ ರಾಘವೇಂದ್ರ(29) ಮೃತಪಟ್ಟ ರೌಡಿಶೀಟರ್. ಸೋಮವಾರ ಜೆ ನಗರದ ಹೊರವಲಯದಲ್ಲಿರುವ ಮೀನಕಳಿಯ ಬೀಚ್ ಬಳಿ ಇಬ್ಬರು ಬೈಕ್ ನಲ್ಲಿ ಬಂದು ರಾಘವೇಂದ್ರನನ್ನು ಅಟ್ಟಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ರಾತ್ರಿ ಮೃತಪಟ್ಟಿದ್ದಾನೆ.
ಹಳೆಯ ಕೊಲೆಯೊಂದರ ದ್ವೇಷದಿಂದ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ರಾಘವೇಂದ್ರನ ಹಳೆಯ ಸ್ನೇಹಿತರೇ ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/06/2022 09:28 am