ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಅಪಘಾತವೆಸಗಿದ ಕಾರು ಚಾಲಕಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಕಾರ್ಕಳ: ಬೆಳ್ಳಣ್-ಮಂಚಕಲ್ಲು ನಡುವಿನ ಜಂತ್ರ ಎಂಬಲ್ಲಿ 2017ರಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರನ ಸಾವಿಗೆ ಕಾರಣನಾದ ಕಾರು ಚಾಲಕ ಪ್ರಸಾದ್ ಶೆಟ್ಟಿಯನ್ನು ಅಪರಾಧಿ ಎಂದು ಘೋಷಿಸಿದ ಕಾರ್ಕಳ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಪ್ರಕಟಿಸಿದೆ.

ಮುಂದಿನಿಂದ ಬರುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಂಗ್ಲೆಗುಡ್ಡೆಯ ಪ್ರಕಾಶ್(47) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಂದಿನ ಪೊಲೀಸ್‌ ವೃತ್ತ ನಿರೀಕ್ಷಕ ಜೋಯ್ ಅಂತೋನಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಅಪರಾಧಿಗೆ 1 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 1 ತಿಂಗಳ ಕಾರಾಗೃಹ ಶಿಕ್ಷೆ, 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಜತೆಗೆ 5 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 1 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್. ತೀರ್ಪು ನೀಡಿದ್ದಾರೆ. ಜಗದೀಶ್ ಜಾಲಿ, ಶೋಭಾ ಮಹಾದೇವ ನಾಯ್ಕ ಸರ್ಕಾರದ ಪರ ವಾದ ಮಂಡಿಸಿದ್ದರು.

Edited By : PublicNext Desk
Kshetra Samachara

Kshetra Samachara

08/06/2022 12:40 pm

Cinque Terre

11.16 K

Cinque Terre

0

ಸಂಬಂಧಿತ ಸುದ್ದಿ