ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧನ

ಮಂಗಳೂರು: ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳಿಬ್ಬರಿಗೆ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ.

ಅರ್ಜುನ್ ಮೂಡುಶೆಡ್ಡೆ ಹಾಗೂ ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್ ಗುಂಡಿನ ದಾಳಿಗೊಳಗಾದ ಆರೋಪಿಗಳು‌. ಕೊಲೆ ಪ್ರಕರಣವೊಂದರ ಆರೋಪಿಗಳ ಪೈಕಿ ಇಬ್ಬರನ್ನು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್‌ನಲ್ಲಿ ಬಂಧಿಸಲು ಪೊಲೀಸರು ಹೋಗಿದ್ದರು. ಈ ವೇಳೆ ಆರೋಪಿಗಳು ಪಿಎಸ್ಐ ನಾಗೇಂದ್ರ, ಎಎಸ್ಐ ಡೇವಿಡ್ ಹಾಗೂ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಪೂಜಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದರು.

ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗಲೂ ಶರಣಾಗದ ಆರೋಪಿಗಳ ಕಾಲಿಗೆ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮ ಇಬ್ಬರೂ ಗಾಯಗೊಂಡಿದ್ದಾರೆ. ಇದೀಗ ಆರೋಪಿಗಳನ್ನು ಮತ್ತು ಹಲ್ಲೆಯಿಂದ ಗಾಯಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಶ್ರೀನಿವಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Edited By : Nagesh Gaonkar
PublicNext

PublicNext

11/06/2022 10:31 am

Cinque Terre

46.5 K

Cinque Terre

3

ಸಂಬಂಧಿತ ಸುದ್ದಿ