ಮಂಗಳೂರು: ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವನನ್ನು ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ. ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿತಯ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಂಧೀತ ಆರೋಪಿ ಇಬ್ರಾಹೀಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.
Kshetra Samachara
12/06/2022 09:28 am