ಕಾಪು: ಶಿರ್ವ ಠಾಣಾ ವ್ಯಾಪ್ತಿಯ ಚಂದ್ರನಗರದ ಅಕ್ರಮ ಕಸಾಯಿ ಖಾನೆಗೆ ಶಿರ್ವ ಪೊಲೀಸರು ಭಾನುವಾರ ದಾಳಿ ನಡೆಸಿದ್ದಾರೆ.
ಚಂದ್ರ ನಗರದ ಅಬೂಬಕ್ಕರ್ ಎಂಬವರ ಮನೆಯಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಕಡಿದು ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಶಿರ್ವ ಎಸ್‌ಐ ರಾಘವೇಂದ್ರ.ಸಿ ಮತ್ತು ಅವರ ತಂಡ ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪೋಲೀಸರನ್ನು ಕಂಡು ಆರೋಪಿಗಳು ಓಡಿಹೋಗಿದ್ದು ಅವರನ್ನು ಬೆನ್ನಟ್ಟಿ ಒರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಶಂಶುದ್ದಿನ್ (53) ಎಂದು ಎನ್ನಲಾಗಿದ್ದು ಉಳಿದ ಮೂವರು ಪರಾರಿಯಾಗಿದ್ದಾರೆ.
ಘಟನಾ ಸ್ಥಳದಿಂದ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶ ಪಡಿಸಿಕೊಳ್ಳಲಾಗಿದೆ.ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
12/06/2022 10:21 pm