ಮಂಗಳೂರು: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದಾಗ ಸಾಂಬಾರು ಪಾತ್ರೆಗೆ ಕಾಲುಜಾರಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ. ಪ್ರಮೀಳಾ ಡಿಸೋಜಾ ಅವರು ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಮೇ 30ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶಾಲೆಯ ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿಟ್ಟಿದ್ದ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
14/06/2022 10:42 pm