ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸರ ದಾಳಿ

ಬಂಟ್ವಾಳ:ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಘಟನೆ ಬಂಟ್ವಾಳದ ಪುತ್ತಿಲ ಗ್ರಾಮದಲ್ಲಿ ಇಂದು ನಡೆದಿದೆ. ಪೂಂಜಾಲಕಟ್ಟೆ ಎಸ್.ಐ ನೇತೃತ್ವದ ತಂಡ ದಾಳಿ ನಡೆಸಿ 2 ಕಿಂಟ್ವಾಲ್ ಗೂ ಅಧಿಕ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ದಟ್ಟ ಕಾಡಿನ ಮಧ್ಯೆ ಎರಡು ಶೆಡ್ಗಳನ್ನು ಹಾಕಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಮಾಂಸ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಮೂರರಿಂದ ನಾಲ್ಕು ಜನ ಆರೋಪಿಗಳು ದನ ಕಡಿದು ವ್ಯಾಪಾರ ವಹಿವಾಟು ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿತ್ತು.

Edited By : Nirmala Aralikatti
Kshetra Samachara

Kshetra Samachara

14/06/2022 10:51 pm

Cinque Terre

7.03 K

Cinque Terre

1

ಸಂಬಂಧಿತ ಸುದ್ದಿ