ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ- ರಾಮಸೇನೆ ಕಾರ್ಯಕರ್ತರು ಅರೆಸ್ಟ್.!

ಮಂಗಳೂರು: ರಾತ್ರಿ ವೇಳೆ ಬೀಟ್ ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಪೊಲೀಸರ ಮೇಲೆ ತಂಡವೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳೂರು ನಗರದ ಉರ್ವ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ದುರ್ಗೇಶ್, ಪ್ರಜ್ವಿತ್, ರಕ್ಷಿತ್ ಬಂಧಿತರು. ಇವರು ರಾಮ ಸೇನೆಯ ಕಾರ್ಯಕರ್ತರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್‌ ಸಿಬ್ಬಂದಿ ವೆಂಕಟೇಶ್ ಮತ್ತು ಧನಂಜಯ್ ಘಟನೆಯಲ್ಲಿ ಗಾಯಗೊಂಡವರು. ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ತಡರಾತ್ರಿ 1:30ರ ವೇಳೆಗೆ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಸಂಘಟನೆಯೊಂದಕ್ಕೆ ಸೇರಿದ ಸುಮಾರು 8 ಮಂದಿ ಯುವಕರ ತಂಡ ರಸ್ತೆ ಬದಿ ಮದ್ಯಪಾನ ಸೇವನೆ ಮಾಡುತ್ತಾ ಹರಟೆ ಹೊಡೆಯುತ್ತಿತ್ತು. ಇದೇ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದರಿಂದ ತಗಾದೆ ತೆಗೆದ ಪಾನಮತ್ತ ಯುವಕರ ತಂಡ ಪೊಲೀಸರ ಮೇಲೆ ಎರಗಿದೆ. ಇಬ್ಬರು ಪೊಲೀಸರಿಗೂ ತಂಡ ಹಲ್ಲೆ ಮಾಡಿದ್ದಲ್ಲದೆ, ಒಬ್ಬಾತ ಪೊಲೀಸರ ಮೇಲೆ ಬೈಕ್ ಚಲಾಯಿಸಲು ಯತ್ನಿಸಿದ್ದಾನೆ. ಬಳಿಕ ತಂಡ ಅಲ್ಲಿಂದ ಪರಾರಿಯಾಗಿದೆ.

ಗಾಯಾಳು ಪೊಲೀಸರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

21/06/2022 01:17 pm

Cinque Terre

5.57 K

Cinque Terre

1

ಸಂಬಂಧಿತ ಸುದ್ದಿ