ಬಜಪೆ: ಕಳೆದ 5 ವರ್ಷಗಳ (2017)ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಗುರುತಿಸಲಾಗಿದೆ.
ಆರೋಪಿಯ ಮೇಲೆ ಮಂಗಳೂರಿನ ಮೂಲ್ಕಿ ಠಾಣೆಯಲ್ಲಿ ಕೊಲೆ ಮತ್ತು ದರೋಡೆ ಸೇರಿ ಒಟ್ಟು 3 ಪ್ರಕರಣ, ಬಂದರು ಠಾಣೆಯಲ್ಲಿ 2 ಪ್ರಕರಣ, ಪಾಂಡೇಶ್ವರ ಠಾಣೆಯಲ್ಲಿ 2 ಪ್ರಕರಣ, ಮೂಡಬಿದ್ರೆ ಠಾಣೆಯಲ್ಲಿ 1 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಬಜಪೆ ಠಾಣಾ ಪಿಎಸ್ಐ ಗುರು ಕಾಂತಿ, ಹೆಡ್ ಕಾನ್ಸಟೇಬಲ್ ರೋಹಿತ್ ಪಾವಂಜೆ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳು ಶ್ರಮಿಸಿರುತ್ತಾರೆ.
Kshetra Samachara
22/06/2022 08:29 pm