ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ : ಲಾರಿ ,ಲಕ್ಷಾಂತರ ಮೌಲ್ಯದ ಅಕ್ಕಿ ವಶಕ್ಕೆ

ಕುಂದಾಪುರ: ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿಯನ್ನು ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಮತ್ತವರ ತಂಡ ವಶಕ್ಕೆ ಪಡೆದಿದೆ. ಬೈಂದೂರು ಸಮೀಪದ ಯಡ್ತರೆ ಬಳಿ ಈ ಘಟನೆ ನಡೆದಿದೆ.

ಡಿವೈಎಸ್ಪಿ ಶ್ರೀಕಾಂತ್ ಕೆ. ಅವರು ಗಸ್ತಿನಲ್ಲಿರುವಾಗ ಶಿರೂರು ಕಡೆಯಿಂದ ಟಾಟಾ ಕಂಪೆನಿಯ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಾಗಿಸಲಾಗುತ್ತಿತ್ತು. ಲಾರಿ ಬರುವುದನ್ನು ನೋಡಿ ಸಿಬ್ಬಂದಿಗಳ ಸಹಾಯದಿಂದ ಲಾರಿಯನ್ನು ನಿಲ್ಲಿಸಿದ್ದಾರೆ.

ಈ ವೇಳೆ ಲಾರಿಯಲ್ಲಿದ್ದ ಚಾಲಕ ಬೆಂಗಳೂರು ದಕ್ಷಿಣ ಹೊನ್ನಗಟ್ಟಿ ನಿವಾಸಿ ಸುನೀಲ್ ಹೆಚ್.ಆರ್ (22) ಮತ್ತು ಇನ್ನೋರ್ವ ವ್ಯಕ್ತಿ ಭಟ್ಕಳ ನಿವಾಸಿ ಮಹಮ್ಮದ್ ಸಮೀರ (25) ಅವರನ್ನು ಲಾರಿಯಲ್ಲಿರುವ ಲೋಡಿನ ಬಗ್ಗೆ ವಿಚಾರಿಸಿದಾಗ ಅಕ್ಕಿಯ ಚೀಲಗಳು ಎಂಬುದಾಗಿ ತಿಳಿಸಿದ್ದಾರೆ.

ಲಾರಿಯೊಳಗಿರುವ ಅಕ್ಕಿ ಚೀಲಗಳ ಬಗ್ಗೆ ಕೂಲಂಕಷವಾಗಿ ವಿಚಾರಿಸಿದಾಗ, ಸರಕಾರದಿಂದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ಎಂಬುದಾಗಿ ತಿಳಿಸಿದ್ದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಲಾರಿಯಲ್ಲಿ 320 ಬಿಳಿ ಪಾಲಿಥೀನ್ ಚೀಲಗಳಿದ್ದು ಪರಿಶೀಲಿಸಿದಾಗ ಪ್ರತಿ ಚೀಲವು 50 ಕೆಜಿಯದಾಗಿದ್ದು, ಒಟ್ಟು 16 ಟನ್ನಷ್ಟು ಅಕ್ಕಿ ಇತ್ತು. ಈ ಪಡಿತರ ಅಕ್ಕಿ ಮೌಲ್ಯ 4 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಪೊಲೀಸರು ಲಾರಿ ಹಾಗೂ ಚಾಲಕನ ಸಿಟಿನ ಬದಿಯಲ್ಲಿ 3 ಗೋಣಿ ಚೀಲಗಳು ಹಾಗೂ ಚೀಲವನ್ನು ಹೊಲಿಯುವ ಯಂತ್ರ, 320 ಅಕ್ಕಿ ತುಂಬಿದ ಚೀಲಗಳು, 3 ಗೋಣಿ ಚೀಲಗಳು ಹಾಗೂ ಚೀಲ ಹೊಲಿಯುವ ಯಂತ್ರವನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
Kshetra Samachara

Kshetra Samachara

24/06/2022 11:47 am

Cinque Terre

18.77 K

Cinque Terre

2

ಸಂಬಂಧಿತ ಸುದ್ದಿ