ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜೀವನದಲ್ಲಿ ಜಿಗುಪ್ಸೆ: ವೃದ್ಧೆ ಆತ್ಮಹತ್ಯೆ

ಉಡುಪಿ: ವೃದ್ಧೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕಾರು ಶೆಡ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು- ಸುಬ್ರಹ್ಮಣ್ಯ ವಾರ್ಡಿನಲ್ಲಿ ಇವತ್ತು ನಡೆದಿದೆ. ಮೃತ ಮಹಿಳೆಯನ್ನು ಲೀಲಾ ಶೆಡ್ತಿ (60 ) ಎಂದು ಗುರುತಿಸಲಾಗಿದೆ.

ಈ ಹಿಂದೆ ಕೂಡ ಇವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮಹಿಳೆಯ ಪತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Edited By : Nirmala Aralikatti
Kshetra Samachara

Kshetra Samachara

25/06/2022 04:02 pm

Cinque Terre

8.47 K

Cinque Terre

0