ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರೆಸಾಟ್೯ಗೆ ಬಂದಿದ್ದ ಪ್ರವಾಸಿಗರಿಂದ ಕುಡಿದ ಮತ್ತಿನಲ್ಲಿ ಹೊಡೆದಾಟ

ಮಂಗಳೂರು:ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಬೆಂಗಳೂರು‌ ಮೂಲದ ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರು ಹೊರವಲಯದ ಉಚ್ಚಿಲದ ಖಾಸಗಿ ಬೀಚ್‌ನ ರೆಸಾರ್ಟ್‌ನಲ್ಲಿ ನಡೆದಿದೆ. ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ಕಿರಿಕ್‌ ಕೂಡಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಎರಡು ಬಸ್‌ಗಳಲ್ಲಿ ಆಗಮಿಸಿದ್ದ ಪ್ರವಾಸಿಗರು ರೆಸಾರ್ಟ್‌ನಲ್ಲಿ ತಡರಾತ್ರಿ ಪಾರ್ಟಿ ಮಾಡಿದ್ರು. ಗೆಸ್ಟ್ ಹೌಸ್‌ನಲ್ಲಿ ಕುಡಿದು ಗಲಾಟೆ ಮಾಡಿ ರಸ್ತೆ ಬದಿಗೆ ಬಂದು ಹೊಡೆದಾಡಿಕೊಂಡಿದ್ದಾರೆ. ಕುಡಿತದ ಅಮಲಿನಲ್ಲಿದ್ದ ಕಿಡಿಗೇಡಿಗಳು ಸ್ಥಳೀಯ ಮನೆಯೊಂದಕ್ಕೆ ನುಗ್ಗಿ ದಾಂಧಲೆ ಮಾಡಿದ ಆರೋಪ ಕೇಳಿ ಬಂದಿದೆ. ಇವರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದಾಗ ಸ್ಥಳೀಯರು ಎಚ್ಚರಿಕೆ ಕೊಟ್ಟಿದ್ರು. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Edited By : Shivu K
Kshetra Samachara

Kshetra Samachara

26/06/2022 10:19 am

Cinque Terre

17.64 K

Cinque Terre

1

ಸಂಬಂಧಿತ ಸುದ್ದಿ