ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವೈಯಕ್ತಿಕ ಕಾರಣದಿಂದ ಮನನೊಂದು ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಿನ್ನೆ ಈ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತರನ್ನು ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಸ್ರಿಯಾ(19) ಎಂದು ಗುರುತಿಸಲಾಗಿದೆ.

ಕುಂದಾಪುರ ಬ್ಯಾರೀಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದ ಈಕೆ ತಲೆನೋವು ಎಂದು ಕೋಣೆಗೆ ಹೋಗಿ ಮಲಗಿದ್ದಳು. ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

28/06/2022 11:59 am

Cinque Terre

9.48 K

Cinque Terre

1

ಸಂಬಂಧಿತ ಸುದ್ದಿ