ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳ್ಳಾಲ: ಅಕ್ರಮ ಗೋಮಾಂಸ ಸಾಗಾಟ: ಇಬ್ಬರ ಬಂಧನ

ಉಳ್ಳಾಲ: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪೊಲೀಸರು ದಾಳಿ ನಡೆಸಿ, ಮಾರುತಿ ಓಮ್ನಿ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿ ಮುಹಮ್ಮದ್ ಆಸೀಫ್ (22) ಉಪ್ಪಲ ನಿವಾಸಿ ಮುಹಮ್ಮದ್ ನೌಫಾಲ್ (22) ಬಂಧಿತ ಆರೋಪಿಗಳು.

ಆರೋಪಿಗಳು ಓಮ್ನಿ ವಾಹನದಲ್ಲಿ 200 ಕೆಜಿ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

01/07/2022 05:30 pm

Cinque Terre

8.14 K

Cinque Terre

0

ಸಂಬಂಧಿತ ಸುದ್ದಿ