ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಗಾಂಜಾ ಸಾಗಾಟ:ಮೂವರ ಬಂಧನ

ವಿಟ್ಲ: ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳಾದ ಎಂಡಿಎಮ್ಎ ಮತ್ತು ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ವಶ ಪಡಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಬಂಧಿತರನ್ನು ಮೂಲತಃ ನೆಲ್ಲಿಗುಡ್ಡೆ ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಸಾಲೆತ್ತೂರು ಸಮೀಪದ ಕಟ್ಟೆತ್ತಿಲ್ಲ ಜಲಾಲೂದ್ಧಿನ್, ಒಕ್ಕೆತ್ತೂರು ಫೈಝಲ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಸಾವಿರಾರು ರೂ ಮೌಲ್ಯದ ಎಂಡಿಎಮ್ಎ, ಗಾಂಜಾ, ಒಂದು ಆಟೋ ರಿಕ್ಷಾ ಹಾಗೂ ಒಂದು ತಲವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಕರ್ನಾಟಕ ಭಾಗಗಳಿಗೆ ಮಾದಕ ವಸ್ತುಗಳನ್ನು ಸಾಗಾಟ ಮಾಡುವ ಇವರು ಅಂತರರಾಜ್ಯ ಡ್ರಗ್ ಪೆಡ್ಲರ್ ಗಳಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಸಬ್ ಇನ್ಸ್ಪೆಕ್ಟರ್ ಸಂದೀಪ್, ಮಂಜುನಾಥ್, ಸಿಬ್ಬಂದಿಗಳಾದ ಹೇಮಾರಾಜ್, ಅಶೋಕ್, ವಿಠಲ್ ರವರು ಪಾಲ್ಗೊಂಡಿದ್ದರು.

Edited By :
Kshetra Samachara

Kshetra Samachara

02/07/2022 05:05 pm

Cinque Terre

8.23 K

Cinque Terre

0

ಸಂಬಂಧಿತ ಸುದ್ದಿ