ಬೈಂದೂರು: ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಭಟ್ಕಳ ಮತ್ತು ಉಡುಪಿ ಮೂಲದವರು ಎಂದು ತಿಳಿದು ಬಂದಿದ್ದು, ಅಬ್ದುಲ್ ರೆಹಮಾನ್ ( 31 ), ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಆರೋಪಿಗಳು ಉಡುಪಿಯಿಂದ ಉತ್ತರಕನ್ನಡ ಜಿಲ್ಲೆಯ ಕಡೆಗೆ ಡ್ರಗ್ಸ್ ಸಾಗಿಸುತ್ತಿದ್ದಾಗ ಡಿ.ವೈ.ಎಸ್.ಪಿ ಶ್ರೀಕಾಂತ್, ಸಿಪಿಐ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದ್ದು, ಬಂಧಿತರಿಂದ 30 ಗ್ರಾಂ ತೂಕದ ಗಾಂಜಾ, 11,420 ಗ್ರಾಂ ತೂಕದ ಎಂ.ಡಿ.ಎಂ.ಎ ಹರಳು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
06/07/2022 08:49 am