ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ನೀರುಪಾಲಾದ ಯುವಕನ ಶವ ಉಳ್ಳಾಲ ಕೋಟೆಪುರ ಕೋಡಿ ಎಂಬಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಈಜಲು ಹೋದ ಯುವಕ ಅಶ್ವಿಥ್ ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಕೋಟೆಪುರ ಕೋಡಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ.

ಪೊಲೀಸ್, ಅಗ್ನಿಶಾಮಕದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪನಡುವಿನ ತಲೆಮೊಗರುವಿನ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿತ್, ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ.ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು.

Edited By : Vijay Kumar
Kshetra Samachara

Kshetra Samachara

06/07/2022 09:29 am

Cinque Terre

7.71 K

Cinque Terre

0

ಸಂಬಂಧಿತ ಸುದ್ದಿ