ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಒಂಟಿ ಮಹಿಳೆ ಕೊಲೆ ಪ್ರಕರಣ: ಅಪರಾಧಿ ದಂಪತಿಗೆ ಜೀವಾವಧಿ ಶಿಕ್ಷೆ !

ಉಡುಪಿ: ತಾಲೂಕಿನ ಸುಬ್ರಮಣ್ಯ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿದ ಅಪರಾಧಿ - ದಂಪತಿಗೆ ಗುರುವಾರ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಧಾರವಾಡ ತಾಲೂಕಿನ ನವಲಗುಂದ ನಿವಾಸಿ ಅಂಬಣ್ಣ ಅಲಿಯಾಸ್ ಅಂಬರೀಶ್ ಹಾಗೂ ಆತನ ಪತ್ನಿ ರಶೀದಾ ಅಲಿಯಾಸ್ ಜ್ಯೋತಿ ಶಿಕ್ಷೆಗೆ ಗುರಿಯಾದವರು.

ದಂಪತಿಗೆ ಶಿಕ್ಷೆ ಜತೆಗೆ ತಲಾ 50,000 ರೂ.ದಂಡ ವಿಧಿಸಲಾಗಿದೆ. 2019ರಲ್ಲಿ ಉಡುಪಿಯ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 80 ವರ್ಷದ ರತ್ನಾವತಿ, ಶೇಡ್ತಿಯನ್ನು ದಂಪತಿ ಬರ್ಬರವಾಗಿ ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 2019 , ಜು.10ರಂದು ಆರೋಪಿ ದಂಪತಿಯನ್ನು ಬಂಧಿಸಿದ್ದರು. ವಿಚಾರಣೆಗೊಳಪಡಿಸಿದಾಗ ರತ್ನಾವತಿ ಶೇಡ್ತಿ ಮನೆಗೆ ನುಗ್ಗಿ, ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಚಿನ್ನಾಭರಣ, ಮೊಬೈಲ್ ಹಾಗೂ 5,000 ರೂ. ದೋಚಿದ್ದರು.

Edited By : PublicNext Desk
Kshetra Samachara

Kshetra Samachara

08/07/2022 10:54 am

Cinque Terre

12.59 K

Cinque Terre

0

ಸಂಬಂಧಿತ ಸುದ್ದಿ