ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫೂಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತರು.
ಬಂಧಿತರಿಂದ ಕಳವು ಮಾಡಿದ 20 ಸಾವಿರ ಮೌಲ್ಯದ ಮೊಬೈಲ್ ಪೋನುಗಳು, ಕೃತ್ಯಕ್ಕೆ ಉಪಯೋಗಿಸಿದ 8 ಲಕ್ಷ ಮೌಲ್ಯದ ಕಾರು, ಮೂರು ಪವರ್ ಬ್ಯಾಂಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಸಬ್ ಇನ್ಸ್ಪೆಕ್ಟರ್ ಪವನ್ ನಾಯಕ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು.
Kshetra Samachara
11/07/2022 12:13 pm