ಪುತ್ತೂರು: ಪುತ್ತೂರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಕೇರಳ ಮೂಲದ ಮುಬಿನ್ (20) ಎಂದು ಗುರುತಿಸಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜೇಶ್.ಕೆ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತ ವಿದ್ಯಾರ್ಥಿ ಮುಬಿನ್ ತನ್ನ ಕಾಲೇಜಿನ ವಿದ್ಯಾರ್ಥಿಗಳಿಗಲ್ಲದೆ, ಪುತ್ತೂರು ನಗರದ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆರೋಪಿ ವಿದ್ಯಾರ್ಥಿಯನ್ನು ಗಾಂಜಾ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತನಿಂದ 550 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿಕೊಳ್ಳಲಾಗಿದೆ. ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Kshetra Samachara
17/07/2022 09:34 pm