ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿದ ಮೂವರು ಪೊಲೀಸರ ವಶಕ್ಕೆ

ಕುಂದಾಪುರ : ಗಾಂಜಾ ಸೇವನೆಗೆ ಸಂಬಂಧಿಸಿ ಕುಂದಾಪುರ ಶಾಸ್ತ್ರಿ ಪಾರ್ಕ್ ಬಳಿ ಎರ್ಮಾಳ್ ಬಡಾ ಗ್ರಾಮದ ಕೀರ್ತಿ (20) ಹಾಗೂ ಕುಂದಾಪುರ ಹೊಸ ಬಸ್ ನಿಲ್ದಾಣದ ಬಳಿ ಕಾಪು ಪೊಲಿಪು ನಿವಾಸಿ ಹಸನಬ್ಬ(30) ಎಂಬವರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಜು.18ರಂದು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಹತ್ತಿರ ಅಶ್ಲೇಷ್ ಕೋಟ್ಯಾನ್ ಎಂಬಾತನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರೆಲ್ಲ ಗಾಂಜಾ ಸೇವನೆ ಮಾಡಿರುವುದು ಮಣಿಪಾಲ ಕೆ.ಎಂ.ಸಿ ಪೊರೆನ್ಸಿಕ್ ಪರೀಕ್ಷೆಯಿಂದ ದೃಢಪಟ್ಟಿದೆ.

Edited By : PublicNext Desk
Kshetra Samachara

Kshetra Samachara

20/07/2022 02:52 pm

Cinque Terre

6.73 K

Cinque Terre

0

ಸಂಬಂಧಿತ ಸುದ್ದಿ