ಮುಲ್ಕಿ: ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಗಣಪತಿ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಎಂಬ ನಸೀಬಿನ ಜೂಜಾಟ ಆಟ ಆಡುತ್ತಿದ್ದ ಸ್ಥಳೀಯ ನಿವಾಸಿಗಳಾದ ಸಂಗಯ್ಯ ಹಿರೀಮಠ ಹಾಗೂ ಮುಸ್ತಾಫಾ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಒಟ್ಟು1090 ರೂ. ಹಾಗೂ ಜೂಜಾಟಕ್ಕೆ ಉಪಯೋಗಿಸಿದ ವಸ್ತುಗಳನ್ನು ಸ್ವಾದಿನಪಡಿಸಿ ಪ್ರಕರಣ ದಾಖಲಿಸಿದ್ದಾರೆ.
Kshetra Samachara
20/07/2022 08:13 pm