ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮಸೂದ್ ಚಿಕಿತ್ಸೆ ಫಲಿಸದೇ ಸಾವು!

ಮಂಗಳೂರು:ಸಣ್ಣ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡದಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮಸೂದ್ ಚಿಕಿತ್ಸೆ ಫಲಿಸದೇ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಸೂದ್ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆಯೇ ಆತನ ಸ್ನೇಹಿತರು ಹಾಗೂ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆಗೆ ಅಗಮಿಸುತ್ತಿದ್ದಾರೆ.‌

ಶಾಸಕ ಯುಟಿ ಖಾದರ್ ಆಸ್ಪತ್ರೆ ಆಗಮಿಸಿದ್ರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆ ನೀಡಿಲ್ಲ ಅಂದ್ರೆ ಮೃತದೇಹ ತೆಗೆದುಕೊಂಡು ಹೋಗಲ್ಲ ಎಂದು ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

21/07/2022 10:05 pm

Cinque Terre

12.5 K

Cinque Terre

1