ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ ಖಾಸಗಿ ಕಾಲೇಜಿನ ಉಪನ್ಯಾಸಕ, ನವವಿವಾಹಿತ ಆತ್ಮಹತ್ಯೆಗೆ ಶರಣು!

ಕುಂದಾಪುರ: ಇಲ್ಲಿನ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಶರಣಾಗಿದ್ದಾರೆ.

ದಕ್ಷಿಣ ಕನ್ನಡ ಮೂಲದ ಆನಂದ ನೇಣಿಗೆ ಶರಣಾದ ಉಪನ್ಯಾಸಕ.ಇವರು ಕುಂದಾಪುರ ಅಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೆ ಇವರು ಮದುವೆಯಾಗಿದ್ದರು.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನೆಯಾಗಿದೆ.

Edited By : Nagaraj Tulugeri
PublicNext

PublicNext

23/07/2022 04:22 pm

Cinque Terre

26.67 K

Cinque Terre

2

ಸಂಬಂಧಿತ ಸುದ್ದಿ