ಮಂಗಳೂರು: ಈಜಲು ಹೋದ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ದುರ್ದೈವಿ ಯುವಕ.
ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಅಲ್ಲಿದ್ದ ಅವರು ಸಂಜೆಯ ವೇಳೆ ತಮ್ಮ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವಿನಲ್ಲಿರುವ ಕಲ್ಲಿನ ಕೋರೆಗೆ ಈಜಲು ತೆರಳಿದ್ದಾರೆ.
ಆದರೆ ಕೋರೆಯ ಆಳ ತಿಳಿಯದೆ ಈಜಲು ಮುಂದಾಗಿದ್ದು, ಈ ವೇಳೆ ಕೋರೆಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Kshetra Samachara
24/07/2022 09:56 pm