ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಪಬ್ ದಾಳಿ: ಪಾರ್ಟಿಯಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ತಡೆದ ಬಜರಂಗದಳದ ಕಾರ್ಯಕರ್ತರು!

ಮಂಗಳೂರು: ಪಬ್ ನಲ್ಲಿ ಪಾರ್ಟಿಯಲ್ಲಿ ನಿರತರಾಗಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಬಜರಂಗದಳ ಕಾರ್ಯಕರ್ತರು ತಡೆದ ಘಟನೆ ರಾತ್ರಿ ನಡೆದಿದೆ.

ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು ಎನ್ನಲಾಗಿದೆ. ಈ ವೇಳೆ ವಿದ್ಯಾರ್ಥಿ - ವಿದ್ಯಾರ್ಥಿನಿಯರು ಕುಸಿತ, ಮೋಜು - ಮಸ್ತಿಯಲ್ಲಿ ತೊಡಗಿದ್ದರು‌ ಆರೋಪಿಸಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ. ಸದ್ಯ ಪಾರ್ಟಿ ಅರ್ಧದಲ್ಲೇ ಮೊಟಕುಗೊಳಿಸಿ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ. ತುಂಡುಡುಗೆಯನ್ನು ತೊಟ್ಟು ಕುಡಿದು ವಿದ್ಯಾರ್ಥಿಗಳು ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.

Edited By : Nagesh Gaonkar
PublicNext

PublicNext

26/07/2022 09:09 am

Cinque Terre

41.24 K

Cinque Terre

12

ಸಂಬಂಧಿತ ಸುದ್ದಿ