ಸುರತ್ಕಲ್: ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸುರತ್ಕಲ್ ಸಮೀಪದ ಎನ್ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸ್ಕೂಟರ್ ಸವಾರರು ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಸ್ಕೂಟರ್ ಸವಾರ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಪೊಲೀಸರಿಗೆ ಕಾಲು ತೋರಿಸಿ ಅಸಭ್ಯ ರೀತಿಯಲ್ಲಿ ವರ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ.
ಇಂತಹ ಅಸಭ್ಯ ವರ್ತನೆ ವರ್ತಿಸುವವರ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರ್ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
26/07/2022 09:20 am