ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ: ಸುಳ್ಯ, ಕಡಬ, ಪುತ್ತೂರು ತಾಲೂಕುಗಳ ಬಂದ್‌ಗೆ ಕರೆ

ಸುಳ್ಯ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಹಾಗೂ ಬೆಳ್ಳಾರೆಯಲ್ಲಿ ಚಿಕನ್ ಸ್ಟಾಲ್ ಹೊಂದಿರುವ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದಾರೆ. ಹಾಗೂ ಕುಟುಂಬಸ್ಥರು ಡಿ.ಸಿ ಬರಬೇಕೆಂದು ಪಟ್ಟು ಹಿಡಿದು ಮೃತದೇಹ ತೆಗೆಯಲು ಬಿಡದೇ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಇಂದು ಸುಳ್ಯ, ಕಡಬ, ಪುತ್ತೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ತಿಳಿಯುತ್ತಲೇ ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಗಡಿ ಪ್ರದೇಶಗಳಲ್ಲಿ ನಾಕಾಬಂದಿ ಏರ್ಪಡಿಸಲಾಗಿದೆ.

ಪ್ರಸ್ತುತ ಪ್ರವೀಣ್ ಅವರ ಮೃತ ದೇಹ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ, ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಿನ್ನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವ ತನಕ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ನೆರೆದಿದ್ದವರು ಆಗ್ರಹಿಸಿದ್ದರು. ಬಳಿಕ ತಡ ರಾತ್ರಿ 1.30 ರ ಸುಮಾರಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆಗಮಿಸಿ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿದರು.

ಮೆರವಣಿಗೆ

ಇಂದು ಬುಧವಾರ ಬೆಳಗ್ಗೆ 9.30 ಕ್ಕೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆ ಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಬಂದ್ ಗೆ ಕರೆ

ಅಲ್ಲದೇ ಇಂದು ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದಾರೆ

ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಹಾಗೂ ಸುಳ್ಯ, ಬೆಳ್ಳಾರೆ ಪೊಲೀಸರು ಸ್ಥಳದಲ್ಲಿದ್ದಾರೆ.

Edited By : Shivu K
PublicNext

PublicNext

27/07/2022 08:32 am

Cinque Terre

66.04 K

Cinque Terre

24

ಸಂಬಂಧಿತ ಸುದ್ದಿ