ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮೃತದೇಹ ಮೆರವಣಿಗೆ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಗಲಾಟೆ ಜೋರಾಗಿದೆ. ಈ ಸಂದರ್ಭದಲ್ಲಿ ಬೆಳ್ಳಾರೆಯ ಮಸೀದಿಗೆ ಕೆಲ ಯುವಕರು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ.
ಅಂತಿನ ನಮನ ಸಲ್ಲಿಸಲು ಆಗಮಿಸಿದ್ದ ಕಾಸರಗೋಡಿನ ಸಂಘ ಪರಿವಾರದ ಹಿರಿಯ ಸದಸ್ಯ ಪಿ.ರಮೇಶ್ ಮೇಲೆ ಪೊಲೀಸರು ಲಾಠಿ ಬೀಸಿದರು. ಲಾಠಿ ಚಾರ್ಜ್ ವೇಳೆ ಸಂಘದ ಹಿರಿಯ ಸದಸ್ಯನ ಮೇಲೆ ಲಾಠಿ ಜಾರ್ಜ್ ಮಾಡಿದ್ದನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ. ಲಾಠಿಯಿಂದ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು. ಒಂದು ವೇಳೆ ಕ್ರಮ ಜರಗಿಸದಿದ್ದರೆ ಮುಂದಿನ ದಿನ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
PublicNext
27/07/2022 10:33 pm