ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಪ್ರವೀಣ್ ಕೊಲೆಗಡುಕರ ಬಂಧನಕ್ಕೆ ಒತ್ತಾಯಿಸಿ ಬಿಲ್ಲವ ಸಂಘ ಪ್ರತಿಭಟನೆ

ಬೆಳ್ತಂಗಡಿ: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ, ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕದ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಮೊಂಬತ್ತಿ ಬೆಳಗಿ, ಮಾನವ ಸರಪಳಿ ರಚಿಸಿ, ಮೌನ ಪ್ರತಿಭಟನೆ ನಡೆಸಲಾಯಿತು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಎಲ್ದಡ್ಕ, ಸಂಘಟನೆಗಳ ಪ್ರಮುಖರಾದ ಪೀತಾಂಬರ ಹೇರಾಜೆ, ಸುಜಿತಾ ವಿ.ಬಂಗೇರ, ಜಯವಿಕ್ರಮ ಕಲ್ಲಾಪು, ಶೇಖರ ಬಂಗೇರ, ಸುಜಾತ ಅಣ್ಣಿ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

27/07/2022 10:57 pm

Cinque Terre

19.87 K

Cinque Terre

0

ಸಂಬಂಧಿತ ಸುದ್ದಿ