ಮಂಗಳೂರು: ನಗರದ ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಯುಧಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ರಾತ್ರಿ 8.30 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿ ಬಂದಿರುವ ದುಷ್ಕರ್ಮಿಗಳ ತಂಡವೊಂದು ಸುರತ್ಕಲ್ ಬಳಿಯ ಎಸ್.ಕೆ.ಮೊಬೈಲ್ ಶಾಪ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಎಂಬಾತನ ಮೇಲೆ ಮಾರಕಾಯುಧದಿಂದ ದಾಳಿ ನಡೆಸಿ ಪರಾರಿಯಾಗಿದೆ.
ತಕ್ಷಣ ಅವರನ್ನು ಸ್ಥಳೀಯ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಬಟ್ಟೆ ಶಾಪ್ ಮಳಿಗೆಯ ಮುಂಭಾಗ ಈ ಘಟನೆ ನಡೆದಿದೆ. ಫಾಝಿಲ್ ಅಂಗಡಿಯ ಬಳಿ ನಿಂತುಕೊಂಡಿದ್ದ ವೇಳೆ ಕಾರಿನಲ್ಲಿ ಬಂದಿರುವ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಜನ ಜಮಾಯಿಸಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
PublicNext
28/07/2022 09:07 pm