ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್‌; ಆರೋಪಿಗಳಿಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯವು ಅ.11ರ ತನಕ (14 ದಿನಗಳ ಕಾಲ) ನ್ಯಾಯಾಂಗ ಬಂಧನ ವಿಧಿಸಿದೆ.

ಕಡಬ ತಾಲೂಕಿನ ಸವಣೂರಿನಲ್ಲಿ ಫಾಸ್ಟ್‌ಫುಡ್ ಅಂಗಡಿ ವ್ಯವಹಾರ ನಡೆಸುತ್ತಿರುವ ಮಹಮ್ಮದ್ ಝಾಕೀರ್ ಮತ್ತು ಬೆಳ್ಳಾರೆಯವನಾಗಿದ್ದು, ಸುಳ್ಯ ತಾಲೂಕಿನ ಗುತ್ತಿಗಾರಿನ ಅಡಿಕೆ ಖರೀದಿ ಅಂಗಡಿಯೊಂದರಲ್ಲಿ ಕೆಲಸಕ್ಕಿರುವ ಶಫೀಕ್ ನ್ಯಾಯಾಂಗ ಬಂಧನಕ್ಕೊಳಗಾದವರು.

ಆರೋಪಿಗಳಾದ ಝಾಕೀರ್ ಮತ್ತು ಶಫೀಕ್‌ನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಗುರುವಾರ ಸಂಜೆ ಪುತ್ತೂರಿನ ಪ್ರಧಾನ ಹಿರಿಯ ವ್ಯಾಪಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರಾದ ಗೌಡ.ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ 302 ಅಡಿಯಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ತಿಳಿಸಿದ್ದಾರೆ.

Edited By : Nagesh Gaonkar
PublicNext

PublicNext

28/07/2022 11:01 pm

Cinque Terre

73.17 K

Cinque Terre

3