ಸುರತ್ಕಲ್: ಮಂಗಳೂರು ನಗರದ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಈಗಾಗಲೇ 21 ಮಂದಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಫಾಝಿಲ್ ಹತ್ಯೆ ಆರೋಪಿಗಳ ಪತ್ತೆಗೆ ಸಂಬಂಧಿಸಿ ಪೊಲೀಸ್ ತನಿಖೆಯು ಚುರುಕಾಗಿದ್ದು, ಶಂಕಿತರ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ. ಈಗಾಗಲೇ ಶಂಕಿತ 21 ಮಂದಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಹತ್ಯೆ ನಡೆದ ಸ್ಥಳದಲ್ಲಿನ ಸಿಸಿ ಕ್ಯಾಮೆರಾ, ಹಂತಕರು ಕೊಲೆ ಮಾಡಿದ ದಿನ ಬಳಸಿರುವ ಕಾರಿನ ಜಾಡು ಹಿಡಿದು ಪೊಲೀಸರ ತನಿಖೆ ಮುಂದುವರಿದಿದೆ.
ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ನನ್ನು ಸುರತ್ಕಲ್ ಜಂಕ್ಷನ್ ನಲ್ಲಿರುವ ಅಂಗಡಿ ಮುಂಭಾಗ ಜುಲೈ 28 ರಂದು ಸಂಜೆ ಹತ್ಯೆ ಮಾಡಲಾಗಿತ್ತು. ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಫಾಝಿಲ್ ಮೃತಪಟ್ಟಿದ್ದರು.
PublicNext
30/07/2022 09:06 am