ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫಾಝಿಲ್ ಹತ್ಯೆ ಕೇಸ್ : ತನಿಖಾಧಿಕಾರಿಯಾಗಿ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನಿಯೋಜನೆ

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಅವರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನಿಯೋಜಿಸಲಾಗಿದೆ.

ಈ ಕೊಲೆ ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಡೆಸುವಂತೆ ಫಾಝಿಲ್ ಅವರ ತಂದೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Edited By : Shivu K
Kshetra Samachara

Kshetra Samachara

31/07/2022 06:09 pm

Cinque Terre

18.8 K

Cinque Terre

0

ಸಂಬಂಧಿತ ಸುದ್ದಿ