ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಾರೆಯಲ್ಲಿ ಪ್ರವೀಣ್‌ನನ್ನ ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು!

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ.

ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಫಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಬೆಳ್ಳಾರೆಯಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶಫೀಕ್ ಹಾಗೂ ಝಾಕೀರ್ ಮಾಹಿತಿ ಮೇರೆಗೆ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

01/08/2022 11:31 pm

Cinque Terre

9.07 K

Cinque Terre

0

ಸಂಬಂಧಿತ ಸುದ್ದಿ