ಮಂಗಳೂರು: ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಬೆಳ್ಳಾರೆ ನಿವಾಸಿ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ (32) ಹಾಗೂ ಹ್ಯಾರಿಸ್ (42) ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 27ರಂದು ಶಫೀಕ್ ಹಾಗೂ ಝಾಕಿರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ತನಿಖೆಯನ್ನು ಮುಂದುವರೆಸಿ ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರಗಳ ಮೇರೆಗೆ ಸದ್ದಾಂ ಮತ್ತು ಹ್ಯಾರಿಸ್ ನನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇದುವರೆಗೆ ನಡೆಸಲಾದ ತನಿಖೆಯ ಆಧಾರದ ಮೇಲೆ, ತನಿಖಾ ತಂಡವು ಈ ಪ್ರಕರಣದಲ್ಲಿ ಶಂಕಿತ ಸಂಚುಕೋರರು ಮತ್ತು ಹಲ್ಲೆಕೋರರನ್ನು ಗುರುತಿಸಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ.
Kshetra Samachara
02/08/2022 01:13 pm