ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಮೂವರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.ಇವರು ಹಾವಂಜೆ ಗ್ರಾಮದ ಶೇಡಿಗುಳಿ ಎಂಬಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳ ಸ್ಯಾಂಟ್ರೋ ಕಾರಿನಲ್ಲಿ ಮನೆಯ ಬಾಗಿಲು ಒಡೆಯುವ ಕಬ್ಬಿಣದ ರಾಡ್, ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ.ದಿಲೀಪ್ ಶೆಟ್ಟಿ , ರಾಜನ್ ಮತ್ತು ಷಣ್ಮುಗಂ ಬಂಧಿತರು.
ಆರೋಪಿಗಳಿಂದ ಬೆಲೆ ಬಾಳುವ ಚಿನ್ನಾಭರಣ , ಬೆಳ್ಳಿ ಆಭರಣ , ಕೃತ್ಯಕ್ಕೆ ಬಳಸಿದ ಸ್ಯಾಂಟ್ರೋ ಕಾರು, ಒಂದು ಓಮ್ನಿ ಕಾರು ಸಹಿತ ಸುಮಾರು 20 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ದಿಲೀಪ್ ಶೆಟ್ಟಿ , ಸ್ಯಾಂಟ್ರೋ ಮತ್ತು ಓಮ್ನಿ ಕಾರನ್ನು ಬಳಸಿಕೊಂಡು ಬೆಂಗಳೂರಿನಿಂದ ಕುಖ್ಯಾತ ಕಳ್ಳ ರಾಜನ್ ,ಕುಟ್ಟಿ ವಿಜಯನ್ , ಸಜಿತ್ ವರ್ಗಿಸ್ ಇವರೊಂದಿಗೆ ಬಂದು ಹಾಸನ, ದ.ಕ ಮತ್ತು ಉಡುಪಿ ಭಾಗದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದ.
PublicNext
04/08/2022 05:09 pm