ಬೆಳ್ತಂಗಡಿ: ಇಲ್ಲಿನ ಉಜಿರೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮಹಿಳೆಯೋರ್ವರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ನಿವಾಸಿ ಚೈತ್ರಾ ಅಡಿಗ ಮೃತಪಟ್ಟ ಮಹಿಳೆ. ಚೈತ್ರಾ ಅಡಿಗ ಪತಿ ದೀಪಕ್ ಹಾಗೂ ಪುತ್ರಿಯೊಂದಿಗೆ ಮುಂಡ್ರುಪ್ಪಾಡಿಯಲ್ಲಿ ವಾಸಿಸುತ್ತಿದ್ದರು.
ಇಂದು ಬೆಳಗ್ಗೆ ಅವರು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನೂ ತಿಳಿದು ಬಂದಿಲ್ಲ.
ಘಟನೆ ನಡೆದ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/08/2022 05:25 pm