ಕುಂದಾಪುರ : ಶಾಲೆಯಿಂದ ಮಕ್ಕಳನ್ನು ಕರೆದೊಯ್ಯಲು ಕಾಯುತ್ತಿದ್ದ ಮಹಿಳೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಸಂಭವಿಸಿದೆ. ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಎಂಬಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ.
ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ದೇವಕಿ ಪೂಜಾರಿ ಅವರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು
ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿ ಕ್ಷಣಾರ್ಧದಲ್ಲಿ ಚಿನ್ನ ಎಗರಿಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ದೇವಕಿ ಪೂಜಾರಿ ತಲೆಗೆ ಗಂಭೀರ ಗಾಯವಾಗಿದ್ದು,ತಕ್ಷಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಂಡ್ಲೂರು ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Kshetra Samachara
05/08/2022 09:10 pm