ಮುಲ್ಕಿ: ಇಲ್ಲಿನ ಪ್ರತಿಷ್ಠಿತ ವಿಜಯ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿದ್ದು ಓರ್ವ ಗಾಯಗೊಂಡು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ (20) ಎಂದು ಗುರುತಿಸಲಾಗಿದೆ.
ವಿಜಯ ಕಾಲೇಜಿನಲ್ಲಿ ಕಾಲೇಜು ಡೇ ಫಂಕ್ಷನ್ ನಡೆಯುತ್ತಿದ್ದು ಈ ಸಂದರ್ಭ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹಳೆ ವೈಷಮ್ಯದಿಂದ ಮಾತಿನ ಚಕಮಕಿ ನಡೆದು ಕ್ಷುಲ್ಲಕ ಕಾರಣಕ್ಕೆ ನೂಕಾಟ ತಳ್ಳಾಟ ನಡೆದಿದೆ. ಈ ಸಂದರ್ಭ ಒಂದು ಗುಂಪಿನ ಸುಮಾರು 10ಮಂದಿ ವಿದ್ಯಾರ್ಥಿಗಳು ಹಾಗೂ ಹೊರಗಿನವರು ಸೇರಿ ಕರ್ನೀರೆ ನಿವಾಸಿ ಸುಜನ್ ಶೆಟ್ಟಿ ಎಂಬವರ ಮೇಲೆ ಹಿಗ್ಗಾ ಮುಗ್ಗ ಕೈಯಿಂದ ಹಾಗೂ ಕಾಲಿನಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಸುಜನ್ ಮುಲ್ಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಕಾಲೇಜಿನಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಿಲ್ಲೆಯಲ್ಲಿ 144 ಸೆಕ್ಷನ್ ಇದ್ದರೂ ಕಾಲೇಜ್ ಆಡಳಿತ ಮಂಡಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
06/08/2022 09:40 am