ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು:ಮಹಡಿಯಿಂದ ಬಿದ್ದು ಬಾಲಕ ಸುಶಾನ್ ರೈ ಮೃತಪಟ್ಟ ಕೇಸ್: ಪೋಷಕರ ದೂರಿನಂತೆ ಪ್ರಕರಣ ದಾಖಲು!

ಪುತ್ತೂರು:ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಮೃತಪಟ್ಟ ಸುದಾನ ವಸತಿಯುತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ ಅವರ ಅಂತ್ಯಕ್ರಿಯೆ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಆ.6 ರಂದು ಸಂಜೆ ನಡೆಯಿತು. ಈ ಮಧ್ಯೆ ಮೃತ ಬಾಲಕನ ತಂದೆ ಮನೋಹರ್ ರೈಯವರು ಘಟನೆಯ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಸುದಾನ ವಸತಿಯುತ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಆ.5ರಂದು ಸಂಜೆ ಬೊಳುವಾರು ವಸತಿ ಸಮುಚ್ಚಯವೊಂದರ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣ ಅವನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಮೃತ ಸುಶಾನ್ ರೈ ತಂದೆ ಮನೋಹರ್ ರೈಯವರು ನೀಡಿದ ದೂರಿನಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನನ್ನ ಮಗ ಮಹಡಿಯಿಂದ ಬಿದ್ದಿರುವ ಕುರಿತು ನನ್ನ ಪತ್ನಿ ನನಗೆ ಮಾಹಿತಿ ನೀಡಿದ್ದರು. ನಾನು ಘಟನಾ ಸ್ಥಳಕ್ಕೆ ಹೋಗುವ ಸಂದರ್ಭದಲ್ಲಿ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ನಾನು ಆಸ್ಪತ್ರೆಗೆ ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದೆ. ಅಲ್ಲಿ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ನನ್ನ ಮಗ ಮೃತಪಟ್ಟ ಘಟನೆ ಕುರಿತು ತನಿಖೆ ನಡೆಸಬೇಕೆಂದು ಅವರು ದೂರಿನಲ್ಲಿ ತಿಳಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

07/08/2022 08:06 pm

Cinque Terre

9.46 K

Cinque Terre

0

ಸಂಬಂಧಿತ ಸುದ್ದಿ