ಕಾಪು: ಕಾಪುವಿನ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬೀಗ ಮುರಿದು ದೇವಸ್ಥಾನದ ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯನ್ನು ಒಡೆದು ನಗದು ದೋಚಿ ಪರಾರಿಯಾಗಿದ್ದಾರೆ.
ಭಾನುವಾರ ಬೆಳಗ್ಗಿನ ಜಾವ ಕಾಣಿಕೆ ಡಬ್ಬಿ ಒಡೆದ ಕಳ್ಳರು ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಬರೀ ನೋಟುಗಳನ್ನು ಕದ್ದೊಯ್ದಿದ್ದಾರೆ.
ದೇವಸ್ಥಾನದಲ್ಲಿ ರಾತ್ರಿ ವೇಳೆ ವಾಚ್‌ಮೆನ್ ಇದ್ದರೂ, ಆತ ನಿದ್ರೆಗೆ ಜಾರಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.ವಾಚ್ ಮೆನ್ ಗೆ ಎಚ್ಚರವಾದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
08/08/2022 02:59 pm