ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ನೆಕ್ಕರೆ ಕಾಡಿನಲ್ಲಿ ಕಾಣಿಸಿದ ತಲೆ ಬುರುಡೆ: ಮೃತನ ಗುರುತು ಪತ್ತೆ

ವಿಟ್ಲ: ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಗುರುತಿಸಲಾಗಿದೆ.

ನಾಗೇಶ್ ಗೌಡ ರವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಿನ್ನೆ ಸಂಜೆ ವೇಳೆ ಗುಡ್ಡಕ್ಕೆ ಕಟ್ಟಿಗೆಗೆ ತೆರಳಿದ್ದವರಿಗೆ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು, ಈ ವೇಳೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿ ನಾಪತ್ತೆಯಾದ ನಾಗೇಶ್ ಎಂಬವರ ಮಗನನ್ನು ಸ್ಥಳಕ್ಕೆ ಕರೆಸಿ ಪರಿಶೀಲಿಸಿದಾಗ ಅದು ನಾಗೇಶ್ ಗೌಡ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಾಗೇಶ್ ಗೌಡ ರವರು ನೆಕ್ಕರೆ ಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದು, ಈ ವೇಳೆ ಏನಾದರೂ ಬಿದ್ದು ಸಾವನ್ನಪ್ಪಿದ್ದಾರೆಯೇ ಅಥವಾ ಹೃದಯಾಘಾತ ಸಂಭವಿಸಿತೇ, ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

Edited By : Nagaraj Tulugeri
Kshetra Samachara

Kshetra Samachara

09/08/2022 12:58 pm

Cinque Terre

11.4 K

Cinque Terre

0

ಸಂಬಂಧಿತ ಸುದ್ದಿ