ಮಂಗಳೂರು: ಚಪ್ಪಲಿ ಸೋಲ್ ನೊಳಗಡೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 17.43 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಝ್ ಮಾಡಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪ್ರಯಾಣಿಕ ಆ.10ರಂದು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಈ ಪ್ರಯಾಣಿಕ ಚಪ್ಪಲಿ ಸೋಲ್ ನೊಳಗಡೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡಿರುವುದು ಪತ್ತೆಯಾಗಿದೆ.
ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ಸಹಿತ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈತನಿಂದ 24 ಕ್ಯಾರೆಟ್ 332ಗ್ರಾಂ ತೂಕದ 17.43 ಲಕ್ಷ ರೂ. ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
Kshetra Samachara
10/08/2022 10:27 pm