ಕುಂದಾಪುರ: ತಾಲೂಕಿನ ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನ ಕಳವು ಮಾಡಲು ಪ್ರಯತ್ನಿಸಿ ವಿಫಲರಾಗಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ದಂಪತಿ ಪೈಕಿ ಪತಿ ಜೈಲು ಪಾಲಾದರೆ, ಪತ್ನಿ ರಿಮಾಂಡ್ ಹೋಮ್ ಸೇರಿದ್ದಾಳೆ.
ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿದ್ದು, ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಕದವಿಕ್ಕಿ ಮನೆಗೆ ಹೋದ ಸಂದರ್ಭದಲ್ಲಿ ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ಪ್ರಾಯದ ಪತ್ನಿ ದೇವಸ್ಥಾನಕ್ಕೆ ಭಕ್ತರಂತೆ ಬಂದಿದ್ದರು. ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬಿ ಒಡೆಯುವ ಪ್ರಯತ್ನ ಮಾಡಿ ವಿಫಲರಾಗಿದ್ದರು. ನಂತರ ಗರ್ಭಗುಡಿ ಪ್ರವೇಶಿಸಿ, ಬರಿಗೈಯಲ್ಲಿ ಮರಳಿದ್ದು, ಕಳ್ಳ ದಂಪತಿಯ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಮೊದಲು ಇದು ಯುವಕನ ಕೃತ್ಯ ಎಂದು ನಂಬಲಾಗಿತ್ತು.ಬಳಿಕ ಸಿಸಿ ಕ್ಯಾಮೆರಾ ಜಾಲಾಡಿದಾಗ, ಯುವಕನ ಜೊತೆ ಅಪ್ರಾಪ್ತ ಪತ್ನಿಯೂ ಭಾಗಿಯಾಗಿರುವುದು ಕಂಡುಬಂದಿತ್ತು.
ದಂಪತಿ ದೇವಸ್ಥಾನಕ್ಕೆ ಕನ್ನ ಹಾಕಿ ಖಾಲಿ ಕೈಯಲ್ಲಿ ಹಿಂದಿರುಗಿದರೂ, ಕಳ್ಳರು ಗರ್ಭಗುಡಿಗೆ ನುಗ್ಗಿದ್ದರಿಂದ ಪ್ರಾಯಶ್ಚಿತ್ತಕ್ಕೆ 50-60 ಸಾವಿರ ರೂ. ಖರ್ಚು ಮಾಡಬೇಕಿದೆ. ಕಳ್ಳರು ಗರ್ಭಗುಡಿಗೆ ನುಗ್ಗಿದ್ದರಿಂದ ಶಾಂತಿ, ಶುದ್ಧಿ ವಾಸ್ತು, ಹೋಮ, ಚೋರ ಶಾಂತಿ ಮೂಲಕ ಶುದ್ದೀಕರಿಸಬೇಕಿದೆ ಎಂದು ದೇವಸ್ಥಾನ ಮೂಲಗಳು ತಿಳಿಸಿವೆ.
Kshetra Samachara
11/08/2022 01:35 pm