ಮಂಗಳೂರು: ಒಳ ಉಡುಪಿನೊಳಗೆ ಬಿಚ್ಚಿಟ್ಟು ಅಕ್ರಮವಾಗಿ 43.29 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ ಮಾಡುತ್ತಿದ್ದ ಖದೀಮನೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮೂಲದ ನಿವಾಸಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಈತ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಪರಿವರ್ತಿಸಿ ಒಳ ಉಡುಪಿನೊಳಗಡೆ ಇರುವ ಹೊಲಿದ ಜೇಬಿನೊಳಗಡೆ ಇಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಆತನನ್ನು ಬಂಧಿಸಿರುವ ವಿಮಾನ ನಿಲ್ದಾಣದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈತನಿಂದ 24 ಕ್ಯಾರೆಟ್ ನ 831ಗ್ರಾಂ ತೂಕದ 43.29ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Kshetra Samachara
12/08/2022 07:43 pm