ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟದ ಮಾಡುತ್ತಿದ್ದ ಆರೋಪದಲ್ಲಿ ಭಟ್ಕಳ ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಭಟ್ಕಳ ಮೂಲದ ವ್ಯಕ್ತಿ ಸ್ಪೈಸ್ ಜೆಟ್ ವಿಮಾನದ ಮೂಲಕ 5.97 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡು ಆತನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Kshetra Samachara
12/08/2022 07:45 pm