ಮಂಗಳೂರು: ನಗರದ ಹೊರವಲಯದ ಅಡ್ಯಾರು ಹಿಲ್ಸ್ ನಿವಾಸಿ ಭಾರತಿ ಶೆಟ್ಟಿ(60) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಭಾರತೀ ಶೆಟ್ಟಿ ಪತಿ ಹಾಗೂ ಪುತ್ರನೊಂದಿಗೆ ಅಡ್ಯಾರ್ ಬಳಿ ವಾಸಿಸುತ್ತಿದ್ದು ಕಳೆದ ಕೆಲ ದಿನಗಳ ಹಿಂದೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಾಮಂಜೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ
ಮೃತ ಭಾರತಿ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರನಿವೃತ್ತ ಉಪನ್ಯಾಸಕಿ ಹಾಗೂ ಉತ್ತಮ ವಾಗ್ಮಿ, ನಿರೂಪಕಿ, ಭಜನಾ ಕಾರ್ಯಕ್ರಮಗಳ ಸಂಘಟಕಿ ಎನ್ಎಸ್ಎಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.ಈ ಹಿಂದೆ ಕಿನ್ನಿಗೋಳಿ ಇನ್ನರ್ ವೀಲ್ ಕ್ಲಬ್ ನ ಸದಸ್ಯೆಯಾಗಿದ್ದು ವಿವಿಧ ಸಂಘ-ಸಂಸ್ಥೆಗಳು ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದ್ದರು.
ಅವರ ನಿಧನಕ್ಕೆ ಕಟೀಲು, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Kshetra Samachara
16/08/2022 06:29 pm