ಕುಂದಾಪುರ: ವಿವಿಧ ಕಡೆಗಳಲ್ಲಿ ದಾಳಿ ನಡೆಸಿದ ಪೊಲೀಸರು ಗಾಂಜಾ ಸೇವನೆಗೆ ಸಂಬಂಧಿಸಿ 10 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಾಡಿ ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ಸುದೀಪ್ ಹಾಗೂ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿ ಬೀಚ್ ಸಮೀಪ ಅಬ್ದುಲ್ ರಹ್ಮಾನ್ ಮತ್ತು ಹೆಮ್ಮಾಡಿ ಯಲ್ಲಿ ನಾಗರಾಜ ಮೊಗವೀರ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಪ್ರವಾಸಿ ಮಂದಿರದ ಬಳಿ ಬೀಚ್‌ನಲ್ಲಿ ಗಾಂಜಾ ಸೇವಿಸುತ್ತಿದ್ದ ಆಶಿಶ್, ಅಕ್ಷಿತ್, ನಿಯಾಝ್, ಹರ್ಷ ವರ್ಧನ್, ವಿಶಾಲ್, ಆದಿತ್ಯ ಬರಂಬೆ ಮತ್ತು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಮಾರ್ಕೇಟ್ ಬಳಿ ಶಿರೂರು ಕರಿಕಟ್ಟೆಯ ಅಬ್ದುಲ್ ನೌಫಿಲ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
22/08/2022 10:51 am